You cannot copy content of this page.
. . .

 ವಿವಾದಾಸ್ಪದ ಪೌರತ್ವ (ತಿದ್ದುಪಡಿ) ಕಾಯ್ದೆ ತಡೆ ವಿಧಿಸಲು ಬುಧವಾರ ಸುಪ್ರೀಂ ಕೋರ್ಟ್ ನಿರಾಕರಿಸಿದೆ.

 ಸುಪ್ರೀಂ ಕೋರ್ಟ್‍ ಮುಖ್ಯ ನ್ಯಾಯಮೂರ್ತಿ ಎಸ್‍.ಎ.ಬೋಬ್ಡೆ ನೇತೃತ್ವದ ಮೂವರು ನ್ಯಾಯಾಧೀಶರ ಸಂವಿಧಾನ ಪೀಠವು ಕಾಯ್ದೆ ವಿರುದ್ಧ ಸಲ್ಲಿಕೆಯಾಗಿದ್ದ 143 ಅರ್ಜಿಗಳನ್ನು ವಿಚಾರಣೆ ನಡೆಸಿತು. ಸಲ್ಲಿಕೆಯಾಗಿರುವ ಅರ್ಜಿಗಳಿಗೆ 4 ವಾರದಲ್ಲಿ ಪ್ರತಿಕ್ರಿಯೆ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಗಡುವು ನೀಡಿದೆ.

 ಈಗ ಸಲ್ಲಿಕೆಯಾಗಿರುವ ಅರ್ಜಿಗಳು ಬಗೆಹರಿಯದ ಹೊರತು ಸಿಎಎ ಮೇಲಿನ ಅರ್ಜಿಗಳ ವಿಚಾರಣೆ ನಡೆಸದಂತೆ ಎಲ್ಲಾ ಹೈಕೋರ್ಟ್‌ಗಳಿಗೂ ಕೋರ್ಟ್ ನಿರ್ಬಂಧ ಹೇರಿದೆ.

 ಅಸ್ಸಾಂ ಮತ್ತು ತ್ರಿಪುರಗಳಲ್ಲಿ ಸಿಎಎ ಸಮಸ್ಯೆ ದೇಶದ ಇತರ ಭಾಗಗಳಿಗಿಂತ ಭಿನ್ನವಾಗಿರುವುದರಿಂದ ಈ ಎರಡು ರಾಜ್ಯಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಪ್ರತ್ಯೇಕವಾಗಿ ತೆಗೆದುಕೊಳ್ಳಲಾಗುವುದು ಎಂದು ಮೂವರು ನ್ಯಾಯಾಧೀಶರು ತಿಳಿಸಿದ್ದಾರೆ.

 ಕೇಂದ್ರ ಸರ್ಕಾರದ ಪರವಾಗಿ ಹಾಜರಾಗಿದ್ದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್, ಸಲ್ಲಿಕೆಯಾಗಿದ್ದ 143 ಅರ್ಜಿಗಳಲ್ಲಿ ಸುಮಾರು 60 ಅರ್ಜಿಗಳ ಪ್ರತಿಯನ್ನು ಸರ್ಕಾರಕ್ಕೆ ನೀಡಲಾಗಿದೆ. ಇನ್ನುಳಿದ ಅರ್ಜಿಗಳಿಗೆ ಪ್ರತಿಕ್ರಿಯಿಸಲು ಸಮಯ ಬೇಕು ಎಂದು ನ್ಯಾಯಪೀಠಕ್ಕೆ ತಿಳಿಸಿದರು.     

 

%d bloggers like this: