You cannot copy content of this page.
. . .

ಭತ್ತ ಬೆಳೆಗಾರರಿಗೆ ಸಿಹಿ ಸುದ್ದಿ: 200 ರೂಪಾಯಿ ಪ್ರೋತ್ಸಾಹ ಧನ

  ಭತ್ತದ ಬೆಳೆಗಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ಕೊಟ್ಟಿದೆ. ಕೇಂದ್ರ ಸರ್ಕಾರ ಘೋಷಿಸಿರುವ ಬೆಂಬಲ ಬೆಲೆಯ ಜೊತೆಗೆ ರಾಜ್ಯ ಸರ್ಕಾರ ಕೂಡಾ ಪ್ರತಿ ಕ್ವಿಂಟಲ್‌ಗೆ 200 ರೂಪಾಯಿ ಪ್ರೋತ್ಸಾಹಧನ ನೀಡಲು ನಿರ್ಧರಿಸಿದೆ.

   ಭತ್ತಕ್ಕೆ ಬೆಂಬಲ ಬೆಲೆ ನಿಗಧಿ ಮಾಡುವ ವಿಚಾರ ಸಂಬಂಧ ರಾಯಚೂರು, ಬಳ್ಳಾರಿ, ಕೊಪ್ಪಳ ಭಾಗದ ಜನಪ್ರತಿ ನಿಧಿಗಳು ಹಾಗೂ ರೈತ ಮುಖಂಡರ ನಿಯೋಗ ಸಿಎಂ ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡಿತ್ತು. ಸಚಿವ ಬಿ.ಶ್ರೀರಾಮುಲು, ಕೊಪ್ಪಳ ಸಂಸದ ಕರಡಿ ಸಂಗಣ್ಣ, ಶಾಸಕ ವೆಂಕಟ ರಾವ್ ನಾಡಗೌಡ ನೇತೃತ್ವದ ನಿಯೋಗ ಸಿಎಂ ಭೇಟಿ ಮಾಡಿತ್ತು. ಇವರ ಮನವಿಗೆ ಸ್ಪಂದಿಸಿದ ಸಿಎಂ ಯಡಿಯೂರಪ್ಪ ಪ್ರತಿ ಕ್ವಿಂಟಾಲ್ ಭತ್ತಕ್ಕೆ 200  ರೂಪಾಯಿ ಬೆಂಬಲ ಬೆಲೆ ಘೋಷಿಸಿದ್ದಾರೆ.

ಕೇಂದ್ರ ಸರ್ಕಾರ 1830 ರೂಪಾಯಿ ಬೆಂಬಲ ಬೆಲೆ ನಿಗದಿ ಮಾಡಿದ್ದು, ರಾಜ್ಯ ಸರ್ಕಾರ 200 ರೂಪಾಯಿ ಪ್ರೋತ್ಸಾಹ ಧನ ನೀಡಲು ನಿರ್ಧರಿಸಿದೆ.

 

%d bloggers like this: