You cannot copy content of this page.
. . .

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೇ ಕನ್ನ ಹಾಕಿದ ಕಳ್ಳರು

 ಮೈಸೂರು ಜಿಲ್ಲೆಯ ತಿ.ನರಸೀಪುರದ ಕುಪ್ಯ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ತಡರಾತ್ರಿ ಕಳ್ಳತನವಾಗಿದೆ. ತಡರಾತ್ರಿ ಆರೋಗ್ಯ ಕೇಂದ್ರದಲ್ಲಿ ಬೀಗ ಮುರಿದ ಕಳ್ಳರು ಬೆಲೆಬಾಳುವ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ.

 ಸುಮಾರು ಒಂದು ಲಕ್ಷ ಮೌಲ್ಯದ ಕಂಪ್ಯೂಟರ್, ups, ಟಿ.ವಿ., ಜೆರಾಕ್ಸ್ ಮೆಷಿನ್, ಪ್ರಿಂಟರ್ ಕಳ್ಳತನವಾಗಿದೆ. ತಿ.ನರಸೀಪುರ ಪೊಲೀಸ್‍ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

%d bloggers like this: