You cannot copy content of this page.
. . .

 ಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತು ಎಲ್ಲಾ ವಕೀಲರು ಸಭೆ ನಡೆಸಿ ಚರ್ಚಿಸಿ ತೀರ್ಮಾನಕ್ಕೆ ಬರುವಂತೆ ಸುಪ್ರೀಂ ಕೋರ್ಟ್‍ ಹೇಳಿದೆ. ಅಲ್ಲದೆ ಹಿಂದಿನ ಐವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ ಎತ್ತಿರುವ 7 ಪ್ರಶ್ನೆಗಳನ್ನು ಪರಿಗಣಿಸಲಾಗುವುದು ಎಂದು ಕೂಡ ಹೇಳಿದೆ. ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ಕುರಿತ ಉಲ್ಲೇಖ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ  9 ನ್ಯಾಯಾಧೀಶರ ವಿಸ್ತ್ರೃತ ಪೀಠ ಇಂದು ವಿಚಾರಣೆ ನಡೆಸಿತು.

  ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಅವರ ನೇತೃತ್ವದ 9 ನ್ಯಾಯಾಧೀಶರನ್ನೊಳಗೊಂಡ ಸಾಂವಿಧಾನಿಕ ಪೀಠ ವಿಚಾರಣೆಯನ್ನು ಕೈಗೆತ್ತಿಕೊಂಡು, ಶಬರಿಮಲೆಗೆ ಎಲ್ಲಾ ವಯೋಮಾನದ ಮಹಿಳೆಯರು ಪ್ರವೇಶಿಸುವ ಕುರಿತ ವಿಚಾರಣೆಯನ್ನು ಮಾತ್ರ ನಡೆಸಲಿದೆ. ಆದರೆ ಈ ವಿವಾದ ಕುರಿತು ವಕೀಲರೆಲ್ಲರೂ ಸಭೆ ಸೇರಿ ಒಂದು ತೀರ್ಮಾನಕ್ಕೆ ಬಂದ ಮೇಲೆ ತೀರ್ಪು ನೀಡಲಾಗುವುದು ಎಂದು ಹೇಳಿತು. ಈ ಹಿನ್ನಲೆಯಲ್ಲಿ ಇದೇ 17ರಂದು ವಕೀಲರ ಸಭೆ ಕರೆಯಲು ಸುಪ್ರೀಂ ಕೋರ್ಟ್ ನ ಸೆಕ್ರೆಟರಿ ಜನರಲ್ ಗೆ ಕೋರ್ಟ್ ಆದೇಶ ನೀಡಿತು.

  ಶಬರಿಮಲೆಗೆ ಎಲ್ಲಾ ವಯೋಮಾನದ ಮಹಿಳೆಯರು ಪ್ರವೇಶಿಸಬಹುದು ಎಂದು 2018ರಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಮೇಲೆ ಅನೇಕ ವಾದ-ವಿವಾದ, ಕಲಹಗಳು ನಡೆದು ತೀರ್ಪನ್ನು ಮರು ಪರಿಶೀಲಿಸುವಂತೆ 50ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾದವು. ಕಳೆದ ನವೆಂಬರ್ 14ರಂದು ಐವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ 3:2ರ ಬಹುಮತದ ತೀರ್ಪಿನಲ್ಲಿ ವಿಚಾರಣೆಯನ್ನು ಏಳು ನ್ಯಾಯಾಧೀಶರನ್ನೊಳಗೊಂಡ ವಿಸ್ತ್ರೃತ ಪೀಠಕ್ಕೆ ಉಲ್ಲೇಖಿಸಿತ್ತು.

 

%d bloggers like this: