You cannot copy content of this page.
. . .

ಸಿದ್ದರಾಮಯ್ಯ ಅವರಿಗೆ ನಿಷೇಧ ಹೇರಿ; ಚುನಾವಣಾ ಆಯೋಗಕ್ಕೆ ದೂರು

   ಸಿದ್ದರಾಮಯ್ಯ ಅವರು ಉಪಚುನಾವಣೆಯಲ್ಲಿ ಪ್ರಚಾರ ಮಾಡುವುದಕ್ಕೆ ನಿಷೇಧ ಹೇರಬೇಕೆಂದು ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ ಮಾಡಿದೆ. ಬಿಜೆಪಿಯಿಂದ ನೋಟು ಪಡೆದು ಕಾಂಗ್ರೆಸ್‍ ಗೆ ಮತ ಹಾಕಿ ಎಂದು ಸಿದ್ದರಾಮಯ್ಯ ಪ್ರಚಾರ ಭಾಷಣಗಳಲ್ಲಿ ಹೇಳುತ್ತಿದ್ದಾರೆ. ಈ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಉಪಚುನಾವಣೆಯಲ್ಲಿ ಪ್ರಚಾರ ಮಾಡದಂತೆ ಸೂಚನೆ ನೀಡಬೇಕೆಂದು ಬಿಜೆಪಿ, ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

  ಹಿರೇಕೆರೂರಿನಲ್ಲಿ ನಿನ್ನೆ (ಬುಧವಾರ) ಸಿದ್ದರಾಮಯ್ಯ ಕಾಂಗ್ರೆಸ್‍ ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಅನರ್ಹ ಶಾಸಕರು ಬಾಂಬೆಗೆ ಹೋಗಿ ತಮ್ಮನ್ನು ತಾವು ಮಾರಿಕೊಂಡಿದ್ದಾರೆ. ಕೋಟಿ ಕೋಟಿ ಹಣ ಪಡೆದಿದ್ದಾರೆ. ಹೀಗಾಗಿ ಬಿಜೆಪಿ ಅಭ್ಯರ್ಥಿಗಳು ಕೊಡೋ ಹಣ ಪಡೆದು ಕಾಂಗ್ರೆಸ್‍ ಗೆ ಮತ ಹಾಕಿ ಎಂದು ಹೇಳಿದ್ದರು.

 

%d bloggers like this: