You cannot copy content of this page.
. . .

  ಕೆಪಿಸಿಸಿ ಅಧ್ಯಕ್ಷರ ನೇಮಕ ವಿಚಾರವಾಗಿ ದೆಹಲಿಯಲ್ಲಿ ಭಾರೀ ಕಸರತ್ತು ನಡೆಯುತ್ತಿದೆ. ವರಿಷ್ಠರನ್ನು ಭೇಟಿಯಾಗಲು ದೆಹಲಿಗೆ ತೆರಳಿರುವ ಸಿದ್ದರಾಮಯ್ಯ ಅವರು, ಎಂ.ಬಿ.ಪಾಟೀಲ್‍ ಪರ ಲಾಬಿ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

  ಇಂದು ಬೆಳಗ್ಗೆ ರಾಜ್ಯ ಕಾಂಗ್ರೆಸ್‍ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿದ್ದ ಸಿದ್ದರಾಮಯ್ಯ, ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದರು. ಅನಂತರ ಅಹಮದ್‍ ಪಟೇಲ್‍ ರನ್ನು ಭೇಟಿಯಾಗಿ ಎಂ.ಪಿ.ಪಾಟೀಲ್‍ ಗೆ ಕೆಪಿಸಿಸಿ ಪಟ್ಟ ಕಟ್ಟುವಂತೆ ಮನವಿ ಮಾಡಿದರು ಎಂದು ಹೇಳಲಾಗುತ್ತಿದೆ. ಇದೀಗ ಸಿದ್ದರಾಮಯ್ಯ ಅವರು ಸೋನಿಯಾ ಗಾಂಧಿಯವರನ್ನು ಭೇಟಿಯಾಗಿದ್ದು, ಇವತ್ತೇ ಕೆಪಿಸಿಸಿ ಅಧ್ಯಕ್ಷರ ಆಯ್ಕೆಯನ್ನು ಅಂತಿಮಗೊಳಿಸಲಾಗುತ್ತದೆಂದು ಹೇಳಲಾಗುತ್ತಿದೆ.

  ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್‍ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ. ಆದರೆ ಸಿದ್ದರಾಮಯ್ಯ ಅವರು ಡಿಕೆಶಿ ಬದಲಾಗಿ ತಮ್ಮ ಆಪ್ತ ಎಂ.ಬಿ.ಪಾಟೀಲರಿಗೆ ಕೆಪಿಸಿಸಿ ಅಧ್ಯಕ್ಷಗಿರಿ ಕೊಡಿಸಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಎಂ.ಬಿ.ಪಾಟೀಲ್‍ ಗೆ ಕೆಪಿಸಿಸಿ ಅಧ್ಯಕ್ಷಗಿರಿ ಕೊಟ್ಟರೆ ಉತ್ತರ ಕರ್ನಾಟಕಕ್ಕೆ ಆದ್ಯತೆ ನೀಡಿದಂತಾಗುತ್ತದೆ. ಜೊತೆಗೆ ಕರ್ನಾಟಕದಲ್ಲಿ ಅತಿಹೆಚ್ಚು ಮತದಾರರಿರುವ ಲಿಂಗಾಯತರಿಗೆ ಪ್ರಾತಿನಿದ್ಯ ನೀಡಿದಂತಾಗುತ್ತದೆ ಎಂದು ಸಿದ್ದರಾಮಯ್ಯ ಅವರು ವರಿಷ್ಠರಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡುತ್ತಿದ್ದಾರೆಂದು ತಿಳಿದುಬಂದಿದೆ.

 

Leave a Reply

 

%d bloggers like this: