You cannot copy content of this page.
. . .

ಎಸ್‍.ಎಲ್‍.ಭೈರಪ್ಪಗೆ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ

ವರಕವಿ ಡಾ. ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ 2019-20ನೇ ಸಾಲಿನ ಪ್ರಶಸ್ತಿಯನ್ನು ಘೋಷಣೆ ಮಾಡಿದೆ. ಟ್ರಸ್ಟ್ ವತಿಯಿಂದ ನೀಡುವ ಅಂಬಿಕಾತನಯದತ್ತ ರಾಷ್ಟ್ರೀಯ ಬೇಂದ್ರೆ ಪ್ರಶಸ್ತಿಗೆ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪರನ್ನು ಆಯ್ಕೆ ಮಾಡಲಾಗಿದೆ.

  ಈ ಕುರಿತು ಮಾಹಿತಿ ನೀಡಿರುವ ಟ್ರಸ್ಟ್  ಅಧ್ಯಕ್ಷ ಡಾ. ಡಿ.ಎಂ. ಹಿರೇಮಠ,  ಈ ಪ್ರಶಸ್ತಿಯನ್ನು ಜ.31ರಂದು ಸಂಜೆ ಐದು ಗಂಟೆಗೆ ಧಾರವಾಡದ ಬೇಂದ್ರೆ ಭವನದಲ್ಲಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು. ಸಾಹಿತಿ ಡಾ.ಗುರುಲಿಂಗ ಕಾಪಸೆ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಪ್ರಶಸ್ತಿ ಒಂದು ಲಕ್ಷ ರೂ. ನಗದು ಹಾಗೂ ಫಲಕ ಒಳಗೊಂಡಿದೆ.

 

%d bloggers like this: