You cannot copy content of this page.
. . .

ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು

   ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್‍.ನಗರ ತಾಲ್ಲೂಕಿನ ಕುಪ್ಪಳ್ಳಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಗೌತಮ್‍ (14) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ವಿದ್ಯಾರ್ಥಿ.

  ಸೋಮವಾರ ರಾತ್ರಿ ಊಟ ಮಾಡಿ ಮಲಗಿದ್ದ ಗೌತಮ್‍ ಬೆಳಗ್ಗೆ ಎದ್ದಿಲ್ಲ. ಇಂದು ಬೆಳಗ್ಗೆ ಇತರ ಸಹಪಾಠಿಗಳು ನೋಡಿದಾಗ ಗೌತಮ್‍ ಸಾವನ್ನಪ್ಪಿರುವುದು ಗೊತ್ತಾಗಿದೆ. ಮೃತ ಗೌತಮ್‍ ಸಾಲೆಕೊಪ್ಪಲು ಗ್ರಾಮದ ಶಿವಣ್ಣ ಮತ್ತು ರೇಖಾವತಿ ದಂಪತಿಯ ಪುತ್ರ. ಗೌತಮ್‍ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

 

%d bloggers like this: