You cannot copy content of this page.
. . .

ಕಳ್ಳತನ ಪ್ರಕರಣ ಎದುರಿಸುತ್ತಿದ್ದ ವ್ಯಕ್ತಿ ನೇಣಿಗೆ ಶರಣು

 ಮೈಸೂರು: ನ್ಯಾಯಾಲಯದಲ್ಲಿ ಕಳ್ಳತನ ಪ್ರಕರಣ ಎದುರಿಸುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

 ರಾಮನಗರ ಜಿಲ್ಲೆಯ ತಿಬ್ಬೇಗೌಡನದೊಡ್ಡಿಯ ನಿವಾಸಿ ನಾರಾಯಣ ನಾಯಕ (32) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಈಚೆಗೆ ಮೈಸೂರಿಗೆ ಆಗಮಿಸಿ ಗಾಯತ್ರಿಪುರಂನಲ್ಲಿ ಬಾಡಿಗೆ ಮನೆಯಲ್ಲಿ ಸೋಮವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 ಇವರ ಮೇಲೆ ಬಿಡದಿ, ರಾಮನಗರ ಠಾಣೆಗಳಲ್ಲಿ ಕಳ್ಳತನದ ಪ್ರಕರಣಗಳು ದಾಖಲಾಗಿ, ಜೈಲಿಗೆ ಹೋಗಿ ಬಂದಿದ್ದರು. ವಿಚಾರಣೆಗಾಗಿ ನ್ಯಾಯಾಲಯಕ್ಕೆ ಅಲೆದು ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ. ಈ ಸಂಬಂಧ ನಜರಬಾದ್‍ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

 

%d bloggers like this: