You cannot copy content of this page.
. . .

 ನಿರ್ಭಯಾ ಅತ್ಯಾಚಾರ, ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳ ಪೈಕಿ ಒಬ್ಬರಾದ ಅಕ್ಷಯ್‍ ಕುಮಾರ್ ಸಿಂಗ್ ಸಲ್ಲಿಸಿದ್ದ ಪರಿಹಾರಾತ್ಮಕ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಅಪರಾಧಿಗಳಿಗೆ ಗಲ್ಲುಶಿಕ್ಷೆ ಖಾಯಂ ಆಗಿದೆ.

 ಅಪರಾಧಿಗಳಿಗೆ ಫೆ.1ಕ್ಕೆ ಗಲ್ಲುಶಿಕ್ಷೆ ವಿಧಿಸಿ ದೆಹಲಿ ನ್ಯಾಯಾಲಯ ಆದೇಶ ಹೊರಡಿಸಿತ್ತು. 14 ದಿನಗಳಲ್ಲಿ ಕಾನೂನು ಪರಿಹಾರ ಕಂಡುಕೊಳ್ಳಬಹುದು ಎಂದೂ ಆದೇಶದಲ್ಲಿ ತಿಳಿಸಿತ್ತು. ಹೀಗಾಗಿ, ಕ್ಷಮಾದಾನ ಕೋರಿ ರಾಷ್ಟ್ರಪತಿಗಳಿಗೆ ಅಪರಾಧಿ ಮುಕೇಶ್‍ ಮನವಿ ಸಲ್ಲಿಸಿದ್ದರು. ರಾಷ್ಟ್ರಪತಿಗಳು ಅದನ್ನು ತಿರಸ್ಕರಿಸಿದ್ದರು. ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‍ಗೆ ಮುಕೇಶ್‍ ಮೊರೆ ಹೋದರೂ ಪ್ರಯೋಜನವಾಗಲಿಲ್ಲ. ಅದೇ ರೀತಿ ಅಕ್ಷಯ್ ಕುಮಾರ್ ಪರಿಹಾರಾತ್ಮಕ ಅರ್ಜಿ ಸಲ್ಲಿಸಿದ್ದರು. ಅದನ್ನು ಇಂದು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

 

%d bloggers like this: