You cannot copy content of this page.
. . .

 ಕೇರಳ ಉಗ್ರರೊಂದಿಗೆ ಸಂಪರ್ಕ ಹೊಂದಿದ್ದರು ಎಂಬ ಮಾಹಿತಿ ಆಧಾರಿಸಿ ಚಾಮರಾಜನಗರದಲ್ಲಿ ಇಬ್ಬರು ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ.

 ಚಾಮರಾಜನಗರ ಜಿಲ್ಲಾ ಪೊಲೀಸರು, ಆಂತರಿಕ ಭದ್ರತಾ ದಳ, ಭಯೋತ್ಪಾದಕ ನಿಗ್ರಹ ದಳದಿಂದ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಕೇರಳ ಉಗ್ರರೊಂದಿಗೆ ದೂರವಾಣಿ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ಶಂಕಿತ ಉಗ್ರರನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಈ ಸಂಬಂದ ಗುಂಡ್ಲುಪೇಟೆ ಪೊಲೀಸ್‍ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ.

 ಇವರು ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಭಯೋತ್ಪಾದಕ ಸಂಘಟನೆಗಳೊಂದಿಗೆ ನಂಟಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮೂಲತಃ ಗುಂಡ್ಲುಪೇಟೆಯವರಾದರೂ ಹೆಚ್ಚಿನ ಕಾಲ ಬೇರೆ ಕಡೆ ಕಾಲ ಕಳೆಯುತ್ತಿದ್ದರು. ಕಳೆದ ಒಂದು ತಿಂಗಳಿಂದ ಇಬ್ಬರ ಮೇಲೂ ನಿಗಾವಹಿಸಿದ್ದ ಪೊಲೀಸರ ತಂಡ ಭಾನುವಾರ ಕಾರ್ಯಾಚರಣೆ ನಡೆಸಿ ಬಂದಿಸಿದ್ದಾರೆ.

ಈ ಹಿಂದೆ ಮೈಸೂರಿನಲ್ಲೂ ಇಬ್ಬರು ಉಗ್ರರನ್ನು ಬಂಧಿಸಲಾಗಿತ್ತು

ಮೈಸೂರಿನಲ್ಲಿ ಈ ಹಿಂದೆ ಇಬ್ಬರು ಉಗ್ರರನ್ನು ಬಂಧಿಸಲಾಗಿತ್ತು. ಈಗ ಚಾಮರಾಜನಗರ ಜಿಲ್ಲೆಯಲ್ಲಿ ಶಂಕಿತ ಉಗ್ರರು ಬಂಧನಕ್ಕೆ ಒಳಗಾಗಿರುವುದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ.

 

%d bloggers like this: