You cannot copy content of this page.
. . .

  ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ದೆಹಲಿಯ ತೀಸ್ ಹಜಾರಿ ನ್ಯಾಯಾಲಯ ಬಿಜೆಪಿಯಿಂದ ಉಚ್ಛಾಟಿತ ಶಾಸಕ ಕುಲದೀಪ್ ಸೆಂಗರ್ ಗೆ ಜೀವಾವಧಿ ಶಿಕ್ಷೆಯಾಗಿದೆ.

ದೆಹಲಿಯ ಜಿಲ್ಲಾ ನ್ಯಾಯಾಲಯವು ಡಿಸೆಂಬರ್ 16ರಂದು ನೀಡಿದ್ದ ತನ್ನ ತೀರ್ಪಿನಲ್ಲಿ ಸೆಂಗರ್ ಅವರನ್ನು ದೋಷಿ ಎಂದು ಘೋಷಿಸಿತ್ತು. ಶಿಕ್ಷೆಯ ಪ್ರಮಾಣವನ್ನು ಇಂದು ಘೋಷಿಸುವುದಾಗಿ ಹೇಳಿತ್ತು.

  ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ಅಪ್ರಾಪ್ತ ಬಾಲಕಿ ಮೇಲೆ ಜೂನ್ 4 2017ರಂದು ಅತ್ಯಾಚಾರ ನಡೆದಿತ್ತು. ಈ ಪ್ರಕರಣದಲ್ಲಿ ಬಿಜೆಪಿ ಶಾಸಕನಾಗಿದ್ದ ಕುಲದೀಪ್ ಸೆಂಗಾರ್ ಜೊತೆಗೆ ಇನ್ನೂ ನಾಲ್ವರ ಹೆಸರು ಕೇಳಿಬಂದಿತ್ತು. ಆ ಆರೋಪಿಗಳು ಜಾಮೀನಿನ ಮೇಲೆ ಹೊರಬಂದಿದ್ದರು. ಕಳೆದ ವರ್ಷ ಯುವತಿ ಕೊಲೆಗೆ ಯತ್ನ ನಡೆದಿತ್ತು. ವಕೀಲರ ಜತೆ ಕೋರ್ಟ್‌ಗೆ ಹೋಗುತ್ತಿದ್ದಾಗ ಆಕೆಯ ಕಾರ್​ಗೆ ಅಪಘಾತ ಮಾಡಿಸಲಾಗಿತ್ತು. ಈ ಅಪಘಾತದಲ್ಲಿ ವಕೀಲ ಮತ್ತು ಆಕೆಯ ಚಿಕ್ಕಪ್ಪ ಮೃತಪಟ್ಟಿದ್ದರು.

  2018ರಿಂದಲೂ ಸಿಬಿಐ ಈ ಪ್ರಕರಣದ ತನಿಖೆ ನಡೆಸುತ್ತಿತ್ತು. ಆದರೆ, ರೇಪ್ ಸಂತ್ರಸ್ತೆಯ ಕುಟುಂಬದವರನ್ನು ನಾಶ ಮಾಡುವ ವ್ಯವಸ್ಥಿತ ಸಂಚು ನಡೆಯುತ್ತಿರುವ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಈ ಪ್ರಕರಣದಲ್ಲಿ ಮಧ್ಯ ಪ್ರವೇಶ ಮಾಡಿತ್ತು. ಸಂತ್ರಸ್ತೆ ಹಾಗೂ ಆಕೆಯ ಕುಟುಂಬದ ಸದಸ್ಯರನ್ನು ಉತ್ತರ ಪ್ರದೇಶದಿಂದ ಹೊರಗೆ ಕರೆ ತರಬೇಕೆಂದು ಸುಪ್ರೀಂ ಕೋರ್ಟ್ ಹೇಳಿತ್ತು. ಹಾಗೆಯೇ, ಪ್ರಕರಣದ ತನಿಖೆಯನ್ನು ಇನ್ನೊಂದು ವಾರದೊಳಗೆ ಮುಗಿಸಬೇಕೆಂದು ಸಿಬಿಐಗೆ ತಾಕೀತು ಮಾಡಿತ್ತು. ಆದರೆ ಸಂತ್ರಸ್ತೆಯನ್ನು ಇತ್ತೀಚೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸಾಯಿಸಿದ್ದರು.

 

%d bloggers like this: