You cannot copy content of this page.
. . .

ತಿಂಗಳೊಳಗೆ ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ; ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ

ದೇಹ ಪೂರ್ತಿ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ  ಶುಕ್ರವಾರ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ. ಉತ್ತರಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ಐದು ಮಂದಿ ಕಾಮುಕರು ಯುವತಿ ಮೇಲೆ ಅಟ್ಟಹಾಸ ಮೆರೆದಿದ್ದರು. ವಿಚಾರಣೆಗೆಂದು ನ್ಯಾಯಾಲಯಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಆಕೆಯ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದರು. 

  ಶೇ.90ರಷ್ಟು ಸುಟ್ಟಗಾಯಗಳಾಗಿದ್ದ 23 ವರ್ಷದ ಸಂತ್ರಸ್ತೆಯನ್ನು ಉತ್ತರಪ್ರದೇಶದ ಲಖನೌನಿಂದ ದೆಹಲಿಗೆ ಕರೆತಂದು ಸಫ್ಧರ್ ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ರಾತ್ರಿ 11.40 ಸಮಯದಲ್ಲಿ ಹೃದಯ ಸ್ತಂಭನದಿಂದ ಸಂತ್ರಸ್ತೆ ಸಾವಿಗೀಡಾಗಿದ್ದಾಳೆ.

  ಉನ್ನಾವೋ ಸಂತ್ರಸ್ತೆ ಸಾವಿಗೀಡಾಗಿರುವ ವಿಷಯ ತಿಳಿಯುತ್ತಿದ್ದಂತೆ ದೇಶಾದ್ಯಂತ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಕೂಡಲೇ ಅತ್ಯಾಚಾರಿಗಳನ್ನು ಹಾಗೂ ಆಕೆಯ ಮೇಲೆ ದಾಳಿ ಮಾಡಿದವರನ್ನು ನೇಣಿಗೇರಿಸಬೇಕೆಂದು ಆಗ್ರಹಿಸುತ್ತಿದ್ದಾರೆ. ಇದೇ ಸಂಬಂಧ ಹೇಳಿಕೆ ನೀಡಿರುವ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್, ಅತ್ಯಾಚಾರಿಗಳನ್ನು ಘಟನೆ ನಡೆದು ಒಂದು ತಿಂಗಳೊಳಗೆ ಗಲ್ಲಿಗೇರಿಸಬೇಕೆಂದು ಆಗ್ರಹಿಸಿದ್ದಾರೆ.

  ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಮೇಲೆ ಮತ್ತೆ ದಾಳಿ ನಡೆಸಿ ಆಕೆಯ ಸಾವಿಗೆ ಕಾರಣವಾದವರ ವಿರುದ್ಧ ಸ್ವಾತಿ ಮಲಿವಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅತ್ಯಾಚಾರಿಗಳನ್ನು ಒಂದು ತಿಂಗಳ ಒಳಗೆ ಗಲ್ಲಿಗೇರಿಸಬೇಕೆಂದು ಉತ್ತರ ಪ್ರದೇಶ ಸರಕಾರ ಮತ್ತು ಕೇಂದ್ರ ಸರಕಾರಕ್ಕೆ ಒತ್ತಾಯಿಸುತ್ತೇನೆ ಎಂದರು. ಸ್ವಾತಿ ಮಲಿವಾಲ್ ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ವಿರೋಧಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

 

 

%d bloggers like this: