You cannot copy content of this page.
. . .

ಮೂರ‍್ನಾಲ್ಕು ದಿನಗಳಲ್ಲಿ ವಿಷ್ಣು ಸ್ಮಾರಕಕ್ಕೆ ಅಡಿಗಲ್ಲು; ಬಿಎಸ್‌ವೈ ಭರವಸೆ

 ಡಿಸೆಂಬರ್ ೩೦ರಂದು ನಟ ಡಾ.ವಿಷ್ಣುವರ್ಧನ್ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಇನ್ನು ಮೂರ್ನಾಲ್ಕು ದಿನಗಳಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗುವುದು’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದಾರೆ.

 ಮುಖ್ಯಮಂತ್ರಿ ಅವರನ್ನು ಭೇಟಿಯಾದ ನಟಿ ಭಾರತಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣದ ಕುರಿತು ಚರ್ಚಿಸಿದರು. ಸ್ಮಾರಕ ನಿರ್ಮಾಣ ಎಲ್ಲಿ ಮಾಡಬೇಕು ಎಂಬ ವಿಚಾರವಾಗಿ ಅನೇಕ ವರ್ಷಗಳವರೆಗೆ ವಿವಾದ ಉಂಟಾಗಿತ್ತು. ಭಾರತಿ ವಿಷ್ಣುವರ್ಧನ್ ಅವರು ಮೈಸೂರಿನಲ್ಲಿಯೇ ಸ್ಮಾರಕ ನಿರ್ಮಾಣ ಮಾಡುವ ಬಗ್ಗೆ ಪಟ್ಟಿ ಹಿಡಿದಿದ್ದರು. ಆಗ ಸರ್ಕಾರ ಮೈಸೂರಿನ ಕಸಬಾ ಹೋಬಳಿಯ ಹಾಲಾಳು ಗ್ರಾಮದಲ್ಲಿ ಸ್ಮಾರಕ ನಿರ್ಮಾಣಕ್ಕೆ ನೀಡಿದ್ದ ಜಾಗಕ್ಕಾಗಿ ಐವರು ತಕರಾರು ತೆಗೆದಿದ್ದರು. ಈ ವ್ಯಾಜ್ಯ ಕೋರ್ಟ್ ಮೆಟ್ಟಿಲೇರಿತ್ತು.

 ಏಪ್ರಿಲ್‌ನಲ್ಲಿ ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ನರೇಂದರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅಧೀನ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿತು. ಇದರಿಂದ ಸ್ಮಾರಕ ನಿರ್ಮಾಣಕ್ಕಿದ್ದ ಕಾನೂನು ತೊಡಕು ಬಗೆಹರಿದಂತಾಗಿದೆ.

 

%d bloggers like this: